ಗಾರ್ಮೆ೦ಟಿನ ಕೂಲಿಯೊಬ್ಬಳು
ಅವಸರದಿ ಸ್ಟಿಚ್ ಮಾಡುವಾಗ ಸೂಜಿ ಕೈಗ ನೆಟ್ಟು
ಮೆಲ್ಲಗೆ ಜಿನುಗಿದ ರಕ್ತದ ಕಲೆಗಳು
ಪ್ಯಾಕ್ಟರಿಯ ಮ್ಯಾನೇಜರ್ ಗೆ ಕಾಣದಂತೆ
ಅವಳ ಗೆಳತಿಯೇ ಜೀನ್ಸ್ ಪ್ಯಾಂಟನ್ನು ತೀಡಿ ತೀಡಿ
ಫಾಲಿಶ್ ಮಾಡಿ ಮರೆಮಾಚುತ್ತಾಳೆ !
ಕೆಲಸ ಕಳೆದುಕೊಳ್ಳುವ ಅಪಾಯದಿಂದ ಪಾರುಮಾಡಿ
ಅವಳ ಮುಖದಲ್ಲಿ ಗೆಲುವು ತರುತ್ತಾಳೆ !
*****
ಅದೇ ಜೀನ್ಸ್ ಪ್ಯಾಂಟನ್ನು
ತೊಟ್ಟ ಹುಡುಗಿಯೊಬ್ಬಳು
ಪಬ್ಬಿನಲಿ ಕುಡಿದು ಅಮಲೇರಿ
ಪ್ಯಾಂಟಿನ ಮೇಲೆಲ್ಲಾ ವಿಸ್ಕಿಯು ಚೆಲ್ಲಿದಾಗ
ರಕ್ತದ ಕಲೆ ಮತ್ತೇರಿ
ಗರ್ಮೆ೦ಟ್ ಹುಡುಗಿಯ ಕನಸಿಗೆ ಲಗ್ಗೆ ಇಟ್ಟಿವೆ!
ಇಲ್ಲಿ ಕೈಕಾಲು ಚಾಚದಸ್ಟು
ಪುಟ್ಟ ರೂಮಿನಲ್ಲಿ ಕೈ ಬೆರಳನೋವಲ್ಲಿ
ಗೆಳತಿಯ ಗಟ್ಟಿಯಾಗಿ ಬಿಗಿದಪ್ಪಿ ಮಲಗಿದ್ದಾಳೆ...
ಈಗ ಅವಳಿಗೂ ಮೆಲ್ಲಗೆ ನಶೆ ಏರುತ್ತಿದೆ.
-
ಅರುಣ್ ಜೋಳದಕೂಡ್ಲಿಗಿ
3 ಕಾಮೆಂಟ್ಗಳು:
ಸರ್,
ಕವನ ಓದಿದಾಗ ನನ್ನ ಕೈಬೆರಳು ನೋವಾದಂತೆನಿಸಿ ನೋಡಿಕೊಂಡೆ. ಬರೆದರೆ ಹೀಗೆ ನೇರವಾಗಿ ತಾಕುವಂತೆ ಬರೆಯಬೇಕು ಸರ್....
ಧನ್ಯವಾದಗಳು.
ಕವನದಲಿ ವಾಸ್ತವದ ವಿರೋಧಭಾಸ ಒಮ್ಮೆಗೇ ಎಲ್ಲವ ಹೇಳಿ ಮರೆಯಾದಂತೆ.....
Jeevanada 2 mukhagallanna tumba sulabhavi toriside....
ಕಾಮೆಂಟ್ ಪೋಸ್ಟ್ ಮಾಡಿ